ಕಲಬುರಗಿ ಜಿಲ್ಲೆಯಲ್ಲಿ -412 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲೆಯಲ್ಲಿ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಗೆ ಉದ್ಯೋಗದ ಸುವರ್ಣಾವಕಾಶ ಒದಗಿ ಬಂದಿದೆ. ಒಟ್ಟು 412 ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಮಹಿಳೆಯರು ಕೂಡಲೇ ಅರ್ಜಿ ಸಲ್ಲಿಸಬಹುದು. 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಒಟ್ಟು 412 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಲಬುರಗಿ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 23-ಮಾರ್ಚ್-2026 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ (Quick Highlights)
- ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ.
- ಒಟ್ಟು ಹುದ್ದೆಗಳು: 412 (ಕಲಬುರಗಿ ಜಿಲ್ಲೆಯಾದ್ಯಂತ).
- ಅಫಜಲಪುರ ಯೋಜನೆಯಡಿ ಖಾಲಿ ಹುದ್ದೆಗಳು: 6 ಅಂಗನವಾಡಿ ಕಾರ್ಯಕರ್ತೆ ಮತ್ತು 35 ಸಹಾಯಕಿ ಹುದ್ದೆಗಳು.
- ಅರ್ಹತೆ: ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
- ಅರ್ಜಿ ಸಲ್ಲಿಸುವ ವಿಧಾನ: ಕೇವಲ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 23 ಸಾಯಂಕಾಲ 5:30ರ ಒಳಗಾಗಿ
ಹುದ್ದೆಗಳ ಗ್ರಾಮವಾರು ವಿವರ :-
| ಸ್ಥಳ | ಕಾರ್ಯಕರ್ತೆ | ಸಹಾಯಕಿ |
| ಅಫಜಪುರ | 06 | 35 |
| ಆಳಂದ | 20 | 68 |
| ಚಿಂಚೋಳಿ | 10 | 39 |
| ಚಿತ್ತಾಪುರ | 05 | 29 |
| ಜೇವರ್ಗಿ | 19 | 25 |
| ಕಲಬುರಗಿ ರೂರಲ್ | 13 | 56 |
| ಕಲಬುರಗಿ ಅರ್ಬನ್ | 00 | 11 |
| ಸೇಡಂ | 04 | 21 |
| ಶಹಬಾದ | 12 | 39 |
ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆಯ ಮಾನದಂಡಗಳು
I. ಅರ್ಹತೆ: ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
II. ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
III. ಸ್ಥಳೀಯತೆ:
- ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆಗೆ ಸ್ಥಳೀಯ ಮಜರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆಯುವುದು.
- ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್‌ನಲ್ಲಿ ವಾಸ್ತವ್ಯ ಹೊಂದಿರಬೇಕು ಹಾಗೂ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದಿರಬೇಕು. (ಚುನಾವಣಾ ವಾರ್ಡ್‌ಗಳನ್ನು ಪರಿಗಣಿಸುವಂತಿಲ್ಲ)
- ತಹಶೀಲ್ದಾರ್ / ಉಪ ತಹಶೀಲ್ದಾರರವರ ಮೂರು ವರ್ಷದ ವಾಸ್ತವ್ಯ ದೃಢೀಕರಣದೊಂದಿಗೆ ಸ್ಥಳೀಯರು ಎಂಬುದನ್ನು ದೃಢೀಕರಿಸಲು ಪೂರಕ ದಾಖಲೆಗಳಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತದಾರರ ಗುರುತಿನ ಚೀಟಿಗಳನ್ನು ಪಡೆಯುವುದು. ಮಜರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರ ಪಡೆಯುವುದು.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:-
- ಕನಿಷ್ಠ P.U.C. ತೇರ್ಗಡೆ ಹೊಂದಿರಬೇಕು. S.S.L.C.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
- ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ “ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.S.E.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡುವುದು.
V. ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:-
ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅ) ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ S.S.L.C. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.
ಆ) ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿದ್ದರೂ SSLC ಪರೀಕ್ಷೆಗೆ ಆ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಠ ಹಾಗೂ ಕನಿಷ್ಠ ಅಂಕಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಠ ಹಾಗೂ ಕನಿಷ್ಠ ಅಂಕದಲ್ಲಿ ವ್ಯತ್ಯಾಸವಿದ್ದಲ್ಲಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸತಕ್ಕದ್ದು.
ಇ) ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅವರು ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು. ಹಾಗೂ ಮಾತೃಭಾಷೆ ಕನ್ನಡವಲ್ಲದೇ ಇರುವ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಆಯ್ಕೆ ಸಮಯದಲ್ಲಿ ಸಂದರ್ಶನ ಏರ್ಪಡಿಸಿ ಹಾಗೂ ಅವಶ್ಯವಿದ್ದಲ್ಲಿ ಕನ್ನಡ ಭಾಷೆಯ ಜ್ಞಾನದ ಕುರಿತಂತೆ ಓದಿಸಿ, ಬರೆಸಿ ಅವರ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಸಮಿತಿಯವರು ನಿರ್ಧರಿಸುವುದು.
ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ :-
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಶೇ. 25 ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇರುವ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರನ್ನು ಕಾರ್ಯಕರ್ತೆ / ಸಹಾಯಕಿಯ ಹುದ್ದೆಗೆ ಆಯ್ಕೆ ಮಾಡುವುದು. ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕಗಳಿಸಿದಲ್ಲಿ ವಯೋಹಿರಿಯತವನ್ನು ಪರಿಗಣಿಸಬೇಕು. ವಯಸ್ಸು ಸಮಾನವಿದ್ದಲ್ಲಿ ವಿಧವೆಯರನ್ನು ಪರಿಗಣಿಸಬೇಕು.
ಆಯ್ಕೆ ಆದ್ಯತೆ:-
1. ಆಸಿಡ್ ದಾಳಿಗೆ ತುತ್ತಾದ ಮಹಿಳೆಯರ ಆಯ್ಕೆ:-
ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಅರ್ಹ ಅಭ್ಯರ್ಥಿಗೆ +5 ಬೋನಸ್ ಅಂಕಗಳನ್ನು ನೀಡುವುದು.
2. ಇಲಾಖೆಯ ಸಂಸ್ಥೆಗಳ ನಿವಾಸಿಗಳ ಆಯ್ಕೆ :-
ಇಲಾಖೆಯ ಸುಧಾರಣಾ ಸಂಸ್ಥೆ / ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ ನೇಮಕಾತಿ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ +10 ಬೋನಸ್ ಅಂಕಗಳನ್ನು ನೀಡುವುದು. ವಾಸಸ್ಥಳ ದೃಢೀಕರಣವನ್ನು ಸಲ್ಲಿಸಿರುವ ಆ ಜಿಲ್ಲೆಯಲ್ಲಿ ಎಲ್ಲಿಯಾದರೂ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
3. ವಿಧವೆಯರ ಆಯ್ಕೆ:-
ನೇಮಕಾತಿ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ +5 ಬೋನಸ್ ಅಂಕಗಳನ್ನು ನೀಡುವುದು. ಮರಣ ಪ್ರಮಾಣಪತ್ರ, ವಿಧವಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಲಗತ್ತಿಸುವುದು.
4. ಅಂಗವಿಕಲರ ಆಯ್ಕೆ:-
- ದೈಹಿಕ ಅಂಗವಿಕಲತೆಯ ಪ್ರಮಾಣವನ್ನು ಶೇ.40ಕ್ಕಿಂತ ಹೆಚ್ಚಿರುವ ಹಾಗೆ ನಿಗದಿಪಡಿಸುವುದು. ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳಿಗೆ +5 ಬೋನಸ್ ಅಂಕಗಳನ್ನು ನೀಡುವುದು. ಅಂಗವಿಕಲರು ಪ್ರಸ್ತುತ ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಪ್ರಮಾಣ ಪತ್ರವನ್ನು ಸಲ್ಲಿಸಿರುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳವೆಂದು ಪರಿಗಣಿಸತಕ್ಕದ್ದು.
- ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಅಂಗವಿಕಲತೆಯ ಪ್ರಮಾಣದ ಬಗ್ಗೆ ಸಂಶಯ ಉಂಟಾದಲ್ಲಿ ಆ ಅಭ್ಯರ್ಥಿಯನ್ನು ಆಯ್ಕೆ ಸಮಿತಿಯ ಮುಂದೆ ಖುದ್ದು ಹಾಜರಾಗಲು ಸೂಚಿಸಿ ಸದರಿ ಹುದ್ದೆ ನಿರ್ವಹಿಸಲು ಸಮರ್ಥರಿರುವ ಬಗ್ಗೆ ಸಮಿತಿಯೇ ಪರಿಶೀಲಿಸಿ ನಿರ್ಧರಿಸತಕ್ಕದ್ದು.
ಬೋನಸ್ ಅಂಕಗಳು: (ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರಿಗೆ)
ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕ ಗಳಿಸಿದ್ದಲ್ಲಿ ವಯೋಹಿರಿಯತವನ್ನು ಪರಿಗಣಿಸಬೇಕು. ವಯಸ್ಸು ಸಮಾನವಾಗಿದ್ದಲ್ಲಿ ವಿಧವೆ/ ವಿಚ್ಛೇದಿತಯರನ್ನು ಪರಿಗಣಿಸಬೇಕು. ಮಾಜಿ ದೇವದಾಸಿಯ ಮಗಳು, ಯೋಜನಾ ನಿರಾಶ್ರಿತರು, ವಿಚ್ಛೇದಿತ ಮಹಿಳೆಯರು ಇವರುಗಳಿಗೆ +5 ಬೋನಸ್ ಅಂಕಗಳನ್ನು ನಿಗದಿಪಡಿಸುವುದು. (ಅಧಿಕೃತ ಪ್ರಮಾಣಪತ್ರ ನೀಡುವ ಪರತ್ತಿಗೊಳಪಟ್ಟು)
ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:-
- ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್)
- ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C. ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದ ವಾಸಸ್ಥಳ ದೃಢೀಕರಣ ಪತ್ರ
- ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
- ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
- ಇಲಾಖೆಯ ಸುಧಾರಣಾ ಸಂಸ್ಥೆ / ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು ಹಾಗೂ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
- ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
- ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
official apply link :- https://karnemakaone.kar.nic.in/abcd/
ಆಯ್ಕೆ ವಿಧಾನ:-
- ಅರ್ಜಿ ಸಲ್ಲಿಸಲು ಕನಿಷ್ಠ ಒಂದು ತಿಂಗಳು ನಿಗದಿಪಡಿಸಬೇಕು.
- ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕದ ನಂತರ ಮುಂದಿನ 7 ಕೆಲಸದ ದಿನಗಳೊಳಗೆ ಸಮಿತಿ ಸಭೆ ಸೇರಬೇಕು.
- ಆಯ್ಕೆ ಸಮಿತಿಯ ಎಲ್ಲಾ ಸದಸ್ಯರು ಹಾಜರಾಗಲು ಸಾಧ್ಯವಾಗದಂತಹ ಅನಿವಾರ್ಯ ಕಾರಣಗಳಿದ್ದಲ್ಲಿ ಕನಿಷ್ಠ 2/3ರಷ್ಟು ಸದಸ್ಯರು ಕಡ್ಡಾಯವಾಗಿ ಹಾಜರಿರಬೇಕು.
- ಆನ್‌ಲೈನ್ ನಲ್ಲಿ ಸಲ್ಲಿಸಿದ ಎಲ್ಲಾ ಅರ್ಜಿಗಳನ್ನು ಅಂದೇ ಪರಿಶೀಲಿಸುವುದು.
- ಆನ್‌ಲೈನ್ ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲೆಯನ್ನು ಸಲ್ಲಿಸದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸುವುದು ಮತ್ತು ಅಸ್ಪಷ್ಟ / ಅಪೂರ್ಣ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
- ಸ್ವೀಕೃತವಾದ ಅರ್ಜಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೋಢೀಕೃತ ಪಟ್ಟಿಯನ್ನು ಆನ್ ಲೈನ್ ನಲ್ಲಿ ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್‌ಗನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಂದೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸುವುದು.
- ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಒಂದು ವಾರ (7 ದಿನಗಳು) ಕಾಲಾವಕಾಶ ನೀಡುವುದು. ಹಾಗೂ ಕಾಲಾವಕಾಶ ಮುಗಿದ ಮುಂದಿನ ಕೆಲಸದ ದಿನವೇ ಸಮಿತಿಯ ಸಭೆ ಕರೆದು ಆಕ್ಷೇಪಣೆಗಳು ಸ್ವೀಕೃತವಾದಲ್ಲಿ ಅವುಗಳನ್ನು ಕ್ರೋಢೀಕರಿಸಿ ಚರ್ಚಿಸಿ ಕಾರ್ಯಕರ್ತೆ/ ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿಯನ್ನು ಅಂದೇ ಸೂಚನಾ ಫಲಕದಲ್ಲಿ ಪ್ರಕಟಿಸುವುದು.
- ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಲ್ಲಿ ನೇಮಕಾತಿ ಪ್ರಾಧಿಕಾರವೇ ಚರ್ಚಿಸಿ ನಿಯಮಾನುಸಾರ ಕ್ರಮ ವಹಿಸುವುದು. ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.
- ಆಯ್ಕೆ ನಡವಳಿ ಪುಸ್ತಕದಲ್ಲಿ ಆಯ್ಕೆ ಸಮಿತಿಗೆ ಹಾಜರಾದ ಎಲ್ಲಾ ಸದಸ್ಯರ ಹಾಜರಾತಿ ಪಡೆಯುವುದು. ಆಯ್ಕೆ ಪ್ರಕ್ರಿಯೆ ಮುಗಿದ ನಂತರ ನಡವಳಿಗಳನ್ನು ಸವಿವರವಾಗಿ (speaking order), ಕೇಂದ್ರವಾರು ಆಯ್ಕೆಯಾದ ಅಭ್ಯರ್ಥಿ ಹೆಸರುಗಳನ್ನು ಯಾವ ಮಾನದಂಡಗಳನ್ವಯ ಆಯ್ಕೆ ಮಾಡಲಾಗಿದೆ? ಎಂಬ ಪರಾದೊಂದಿಗೆ ನಡವಳಿಯಲ್ಲಿ ದಾಖಲಿಸಿ ಯಾವುದೇ ತಿದ್ದುಪಡಿಗಳಿಲ್ಲದಂತೆ ಸಕಾರಣದೊಂದಿಗೆ ದೃಢೀಕರಿಸಿ ಹಾಜರಿರುವ ಆಯ್ಕೆ ಸಮಿತಿಯ ಎಲ್ಲಾ ಸದಸ್ಯರ ಸಹಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು.
- ಸಂಬಂಧಪಟ್ಟ ಜಿಲ್ಲೆಯ ಉಪ ನಿರ್ದೇಶಕರು ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯಾಗಿ ಕಾರ್ಯ ನಿರ್ವಹಿಸಲು ನೇಮಕಾತಿ ಆದೇಶಗಳನ್ನು ಹೊರಡಿಸಬೇಕು.
- ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯ ಹುದ್ದೆಯು ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು ಖಾಯಂ ಹುದ್ದೆಯಲ್ಲವೆಂದು ನೇಮಕಾತಿ ಆದೇಶದಲ್ಲಿ ತಿಳಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ವರದಿ ಮಾಡಿಕೊಳ್ಳುವ ಸಮಯದಲ್ಲಿ ಮೂಲ ದಾಖಲಾತಿಗಳು, ವೈದ್ಯಕೀಯ ಪ್ರಮಾಣ ಪತ್ರ (ಫಿಟ್‌ನೆಸ್ ಸರ್ಟಿಫಿಕೇಟ್) ಗಳನ್ನು ಹಾಜರುಪಡಿಸಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪರಿಶೀಲಿಸಿ ವರದಿ ಮಾಡಿಕೊಳ್ಳತಕ್ಕದ್ದು.
- 6 ತಿಂಗಳು ಮುಂಚಿತವಾಗಿ ನಿವೃತ್ತಿಗೊಳ್ಳುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಪಟ್ಟಿ ಮಾಡಿ ಅವರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆಯನ್ನು ಪದೋನ್ನತಿ/ಸ್ಥಾನಪಲ್ಲಟ ನಂತರ ನೇಮಕಾತಿಯ ಮೂಲಕ ಹೊಸ ಪಟ್ಟಿಯನ್ನು ತಯಾರು ಮಾಡಿಕೊಳ್ಳುವುದು. ಕೋರ್ಟ್ ಕೇಸ್ ಹೊರತುಪಡಿಸಿ ಯಾವುದೇ ಕಾರಣಕ್ಕೂ ಗರಿಷ್ಠ 3 ತಿಂಗಳಿಗಿಂತ ಹೆಚ್ಚು ಅವಧಿಯ ವಿಳಂಬವನ್ನು ಮಾಡಬಾರದು.
ಮಿನಿ ಅಂಗನವಾಡಿ ಕಾರ್ಯಕರ್ತೆ/ ಅಂಗನವಾಡಿ ಸಹಾಯಕಿಯರನ್ನು ಕಾರ್ಯಕರ್ತೆಯರನ್ನಾಗಿ ಪದೋನ್ನತಿಗೆ ಗುರುತಿಸುವ ವಿಧಾನದ ಕುರಿತು:-
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಪಿ.ಯು.ಸಿ. ಉತ್ತೀರ್ಣ ಹೊಂದಿದ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊದಲ ಆದ್ಯತೆ ನೀಡುವುದು. ಅಂಗನವಾಡಿ ಸಹಾಯಕಿಯರು 5 ವರ್ಷ ಕನಿಷ್ಠ ಸೇವೆ, ಉತ್ತಮ ಸೇವಾ ದಾಖಲೆ, ಹಿರಿಯ ವಯೋಮಾನ ಹೊಂದಿದ ಸಹಾಯಕಿಯರನ್ನು ಹೆಚ್ಚಿನ ವಿದ್ಯಾರ್ಹತೆ ಹಾಗೂ ವಯಸ್ಸಿನ ಅನುಗುಣವಾಗಿ ಪದೋನ್ನತಿಗೆ ಪರಿಗಣಿಸುವುದು. ಹಾಗೂ ಅದೇ ಗ್ರಾಮ/ ನಗರ ಪ್ರದೇಶದಲ್ಲಿ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ವಾಸವಾಗಿರುವುದು.
ಅನುಕಂಪದ ಆಧಾರದಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಗುರುತಿಸುವ ಬಗ್ಗೆ:
- ಸೇವೆಯಲ್ಲಿರುವಾಗಲೇ ಮರಣ ಹೊಂದಿರುವ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಮಗಳು ಅಥವಾ ಸೊಸೆಯನ್ನು ಅರ್ಹತೆಯ ಮೇಲೆ ಅವರ ತಾಯಿ/ ಅತ್ತೆಯು ನಿರ್ವಹಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗೆ ಅನುಕಂಪದ ಆಧಾರದಲ್ಲಿ, ಆ ಕುಟುಂಬದ ಸದಸ್ಯರಿಂದ ನಿರಾಕ್ಷೇಪಣಾ ಪತ್ರವನ್ನು ನಿಗದಿತ ಮೊತ್ತದ ಛಾಪಾ ಕಾಗದದ ಮೇಲೆ ಪಡೆದು ನೇಮಕ ಮಾಡತಕ್ಕದ್ದು.
- ಅಭ್ಯರ್ಥಿಯು ನಿಗದಿತ ವಿದ್ಯಾರ್ಹತೆ, ವಯೋಮಿತಿ ಮತ್ತು ಸ್ಥಳೀಯರಾಗಿರಬೇಕಾಗಿರುವುದು ಕಡ್ಡಾಯ ಹಾಗೂ ಉಳಿದ ಆಯ್ಕೆ ನಿಯಮಗಳು ಅನ್ವಯಿಸುತ್ತವೆ.
ಶಿಸ್ತು ಪ್ರಾಧಿಕಾರ:-
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಕಾರ್ಯ ನಿರ್ವಹಣೆಯಲ್ಲಿ ಯಾವುದೇ ನ್ಯೂನತೆಗಳ ಬಗ್ಗೆ ದೂರುಗಳು ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ ಸ್ವೀಕೃತಗೊಂಡಲ್ಲಿ ಅಧಿಕಾರಿಗಳಿರುತ್ತದೆ. ಅದರಂತೆ, ಶಿಶುಕ್ಷೇಮ ಕ್ರಮ ಕೈಗೊಳ್ಳಲು ಜಿಲ್ಲಾ ಆಯ್ಕೆ ಸಮಿತಿಗೆ ಭೇಟಿ ನೀಡಿದಾಗ ನ್ಯೂನತೆಗಳು ಕಂಡುಬಂದಲ್ಲಿ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ ಅಧಿಕಾರವಿರುತ್ತದೆ.
ಜಿಲ್ಲಾ/ತಾಲ್ಲೂಕು ಮಟ್ಟದ ಆಯ್ಕೆ ಸಮಿತಿ:-
1. ಜಿಲ್ಲಾ ಮಟ್ಟದ ಆಯ್ಕೆ ಸಮಿತಿ:-
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆ ಸಮಿತಿಯ ಸದಸ್ಯರು:
- ಜಿಲ್ಲಾಧಿಕಾರಿಗಳು – ಅಧ್ಯಕ್ಷರು
- ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ – ಉಪಾಧ್ಯಕ್ಷರು
- ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು – ಸದಸ್ಯರು
- ಆಯುಕ್ತರು / ಉಪ ಆಯುಕ್ತರು ನಗರ ಸಭೆ/ ನಗರಪಾಲಿಕೆ / ಮಹಾನಗ ಪಾಲಿಕೆ / ಬಿ.ಬಿ.ಎಂ.ಪಿ. – ಸದಸ್ಯರು
- ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ – ಸದಸ್ಯರು
- ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ – ಸದಸ್ಯ ಕಾರ್ಯದರ್ಶಿಗಳು
2. ತಾಲ್ಲೂಕು ಮಟ್ಟದ ಪರಿಶೀಲನಾ ಸಮಿತಿ:-
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಅರ್ಜಿಗಳ ಪರಿಶೀಲನಾ ಸಮಿತಿ:
- ತಹಶೀಲ್ದಾರರು – ಅಧ್ಯಕ್ಷರು
- ಕಾರ್ಯ ನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್ – ಉಪಾಧ್ಯಕ್ಷರು
- ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು – ಸದಸ್ಯರು
- ಆಯುಕ್ತರು, ಪುರಸಭೆ/ಪಟ್ಟಣ ಪಂಚಾಯಿತಿ – ಸದಸ್ಯರು
- ಕ್ಷೇತ್ರ ಶಿಕ್ಷಣಾಧಿಕಾರಿಗಳು – ಸದಸ್ಯರು
- ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು – ಸದಸ್ಯ ಕಾರ್ಯದರ್ಶಿಗಳು
ತಾಲ್ಲೂಕು ಸಮಿತಿಯ ಅರ್ಜಿಗಳನ್ನು ಪರಿಶೀಲಿಸಿದ ಪಟ್ಟಿಯನ್ನು ಉಪ ನಿರ್ದೇಶಕರಿಗೆ ಸಲ್ಲಿಸುವುದು. ಉಪ ನಿರ್ದೇಶಕರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅರ್ಜಿಗಳನ್ನು ಕ್ರೋಢೀಕರಿಸಿ ಜಿಲ್ಲಾ ಸಮಿತಿಗೆ ಸಲ್ಲಿಸಿ ನಡವಳಿ ಮಾಡುವುದು.
ಇತರೆ ಪರತ್ತುಗಳು:-
- ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು/ ಉಪ ನಿರ್ದೇಶಕರು ಅಭ್ಯರ್ಥಿಗಳು ಕನ್ನಡ ಭಾಷೆಯಲ್ಲಿ ಅರ್ಜಿಗಳನ್ನು ಡೌನ್ ಲೋಡ್ ಮಾಡಲು ಅವಕಾಶ ಕಲ್ಪಿಸುವುದು.
- ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಾತ್ರ ಅಂತರ್ಜಾಲದಲ್ಲಿ ಪ್ರತಿಫಲನವಾಗುತ್ತಿದ್ದು, ಗ್ರಾಮದ ಮಾಹಿತಿಯನ್ನು ಅಂತರ್ಜಾಲದ ತಂತ್ರಾಂಶದಲ್ಲಿ ಸೇರಿಸುವುದು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು/ಉಪ ನಿರ್ದೇಶಕರು ಗ್ರಾಮ/ವಾರ್ಡ್ ಮಾಹಿತಿಯನ್ನು ಅಂತರ್ಜಾಲದಲ್ಲಿ ಅಪ್ ಲೋಡ್ ಮಾಡುವುದು.
- ಸರ್ಕಾರದ ಆದೇಶ ದಿನಾಂಕ 18.08.2018ರಂತೆ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಸ್ಥಾನಪಲ್ಲಟ ಕೋರಿದಾಗ ಗೌರವ ಸೇವಾವಧಿಯಲ್ಲಿ 2 ಸ್ಥಾನಪಲ್ಲಟಕ್ಕೆ ಅವಕಾಶವಿದ್ದು, ಒಂದು ಬಾರಿ ಸ್ಥಾನಪಲ್ಲಟ ಮಾಡಿದ ನಂತರ 2ನೇ ಸ್ಥಾನಪಲ್ಲಟಕ್ಕೆ 3 ವರ್ಷಗಳ ಅಂತರವಿರಬೇಕು.
ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
official apply link :- https://karnemakaone.kar.nic.in/abcd/
ಇದನ್ನೂ ಓದಿ :- South Central Railway Apprentice Recruitment 2026 Apply Online 2801 Posts SSLC ITI Jobs
ಇದನ್ನೂ ಓದಿ :- NIMHANS Recruitment 2026: 08 ಹುದ್ದೆಗಳ ನೇಮಕಾತಿ – Walk-in ಸಂದರ್ಶನ | ₹30,000 ಸಂಬಳ
Udyogasihi.com ಒಂದು ವಿಶ್ವಾಸಾರ್ಹ ಉದ್ಯೋಗ ಮಾಹಿತಿ ವೆಬ್‌ಸೈಟ್ ಆಗಿದ್ದು, ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ಅಪ್‌ಡೇಟ್‌ಗಳನ್ನು ಸರಳವಾಗಿ ನೀಡುತ್ತದೆ. ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ನೋಟಿಫಿಕೇಶನ್, ಅರ್ಜಿ ವಿಧಾನ, ಪರೀಕ್ಷಾ ಮಾಹಿತಿ ಹಾಗೂ ಕರಿಯರ್ ಮಾರ್ಗದರ್ಶನವನ್ನು ಇಲ್ಲಿ ಸುಲಭವಾಗಿ ಪಡೆಯಬಹುದು.
1 thought on “ಕಲಬುರಗಿ ಜಿಲ್ಲೆಯಲ್ಲಿ ಬೃಹತ್ ನೇಮಕಾತಿ 2026-412 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ”