ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2026
ಯಾದಗಿರಿ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯವು 2026 ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಮೂಲಕ ಆದೇಶ ಜಾರಿಕಾರ (Process Server) ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ (371J) ಪ್ರದೇಶದ ಅಭ್ಯರ್ಥಿಗಳಿಗೆ ಇದು ಉತ್ತಮ ಸರ್ಕಾರಿ ಉದ್ಯೋಗ ಅವಕಾಶವಾಗಿದೆ.ಈ ನೇಮಕಾತಿಯಲ್ಲಿ ಒಟ್ಟು 09 ಹುದ್ದೆಗಳು ಲಭ್ಯವಿದ್ದು, SSLC ಪಾಸ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ಈ ಲೇಖನದಲ್ಲಿ ಅರ್ಜಿ ದಿನಾಂಕ, ಅರ್ಹತೆ, ವಯೋಮಿತಿ, ಆಯ್ಕೆ ವಿಧಾನ, ವೇತನ, Apply Link ಸೇರಿದಂತೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಹುದ್ದೆಯ ವಿವರಗಳು:
- ಆದೇಶ ಜಾರಿಕಾರ : Process Server
- ಒಟ್ಟು ಹುದ್ದೆಗಳ ಸಂಖ್ಯೆ : 09
- ವೇತನ ಶ್ರೇಣಿ : 19900-450-20800-500-22300-550-24500-600-27500-650-30750-700-34250-750-36500 ಮತ್ತು ಇತರೇ ಭತ್ಯೆಗಳು.
ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗಾಗಿ ಸ್ಥಳೀಯ ಹುದ್ದೆಗಳಿಗೆ ಗುರುತಿಸಿರುವ ಮೀಸಲಾತಿ (Local Cadre-371-J):
| ಮೀಸಲಾತಿ ವರ್ಗ | ಇತರೆ | ಮಹಿಳೆ | ಗ್ರಾಮೀಣ | ಅಂ.ವಿ | ಮಾ.ಸೈ | ಒಟ್ಟು |
| ಸಾಮಾನ್ಯ | 01 | 02 | 02 | – | 01 | 06 |
| ಪರಿಶಿಷ್ಟ ಜಾತಿ | – | – | – | 01* | – | 01 |
| ಪ್ರವರ್ಗ-2ಎ | – | – | 01 | 01* | – | 02 |
| ಒಟ್ಟು | 01 | 02 | 03 | 02 | 01 | 09 |
* ಅಂಗವಿಕಲರ ಹುದ್ದೆಯು ಅಂಧ / ದೃಷ್ಟಿ ಮಾಂದ್ಯ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಯಾಗಿದೆ.
ಅರ್ಜಿ ದಿನಾಂಕಗಳು
-
ಅರ್ಜಿ ಪ್ರಾರಂಭ ದಿನಾಂಕ: 13 ಮಾರ್ಚ್ 2026
-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಏಪ್ರಿಲ್ 2026 (ರಾತ್ರಿ 11:59)
-
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13 ಏಪ್ರಿಲ್ 2026
ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಉತ್ತಮ.
ವಿದ್ಯಾರ್ಹತೆ:
- ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕರ್ನಾಟಕ ಸರ್ಕಾರದ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಲಘು ವಾಹನ ಚಾಲನಾ ಪರವಾನಿಗೆ ಪತ್ರ (driving licence) ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವಿಶೇಷ ಸೂಚನೆ:
- 10ನೇ ತರಗತಿ ಅಂಕಗಳು ಶ್ರೇಣಿಯಲ್ಲಿ ಅಥವಾ ಗ್ರೇಡ್‌ನಲ್ಲಿದ್ದರೆ ಅದನ್ನು ಸಂಬಂಧಪಟ್ಟ ಶಾಲಾ ಮುಖ್ಯಸ್ಥರಿಂದ ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು ಮತ್ತು ಪಡೆದ ಅಂಕಗಳನ್ವಯ ಒಟ್ಟು ಶೇಕಡವಾರು ಅಂಕಗಳನ್ನು ಸರಿಯಾಗಿ 100 ಪ್ರತಿಶತದಲ್ಲಿ ಅರ್ಜಿಯಲ್ಲಿ ನಮೂದಿಸುವುದು. ಅವುಗಳಲ್ಲಿ ವ್ಯತ್ಯಾಸ ಕಂಡು ಬಂದರೆ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ಅಭ್ಯರ್ಥಿಯು ಸರಿಯಾಗಿ ಅಧಿಸೂಚನೆಯನ್ನು ಓದಿ ಕೇವಲ ಒಂದು ಅರ್ಜಿಯನ್ನು ಮಾತ್ರ ತಾವು ಕ್ಷೇಮು ಮಾಡುವ ಮೀಸಲಾತಿಗಳನ್ನು ನಮೂದಿಸಿ ಆನ್‌ಲೈನ್ ಮೂಲಕ ಸಲ್ಲಿಸಬೇಕು.
ಆಯ್ಕೆ ವಿಧಾನ:
ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟೀರಿಯಲ್ ಮತ್ತು ಇತರ ಹುದ್ದೆಗಳು) ನಿಯಮಗಳು 1982 ಮತ್ತು (ತಿದ್ದುಪಡಿ) ನಿಯಮಗಳು 2007 ಮತ್ತು 2021 ರನ್ವಯ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ (1:25ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಟಿಪ್ಪಣಿ: ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.
ಮಹಿಳಾ ಮತ್ತು ಮಾಜಿ ಸೈನಿಕ ಮೀಸಲಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದೇ ಇದ್ದ ಪಕ್ಷದಲ್ಲಿ ಆ ಹುದ್ದೆಗಳನ್ನು ಆಯಾ ಪಂಗಡಗಳ ಇತರ ಅಭ್ಯರ್ಥಿಗಳಿಂದ ಭರ್ತಿ ಮಾಡಲಾಗುವುದು (G.O No. DPAR 34 Seneni 95, Bengaluru dated 15th July, 1996).
ವಯೋಮಿತಿ (ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗಿ)
- ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದಂದು ಅಭ್ಯರ್ಥಿಯು
a) ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಗರಿಷ್ಠ ವಯಸ್ಸನ್ನು ಮೀರಿರಬಾರದು.
b) ಗರಿಷ್ಠ ವಯೋಮಿತಿ:
| ವರ್ಗ | ವಯೋಮಿತಿ |
| ಸಾಮಾನ್ಯ ವರ್ಗ | 35 + 5* ವರ್ಷ ಮೀರಿರಬಾರದು |
| ಪ್ರವರ್ಗ 2ಎ, 2ಬಿ, 3ಎ, 3ಬಿ | 38 + 5* ವರ್ಷ ಮೀರಿರಬಾರದು |
| ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 | 40 + 5* ವರ್ಷ ಮೀರಿರಬಾರದು |
.
- ಅಭ್ಯರ್ಥಿಯು ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅಥವಾ ಸ್ಥಳೀಯ ಪ್ರಾಧಿಕಾರದಲ್ಲಿ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾದ ಅಥವಾ ರಾಜ್ಯ ಅಧಿನಿಯಮ ಅಥವಾ ಕೇಂದ್ರ ಅಧಿನಿಯಮದ ಮೂಲಕ ಸ್ಥಾಪನೆಯಾಗಿ ಕರ್ನಾಟಕ ರಾಜ್ಯ ಸರ್ಕಾರದ ಸ್ವಾಮ್ಯ ಅಥವಾ ನಿಯಂತ್ರಣದಲ್ಲಿರುವ ನಿಗಮದಲ್ಲಿ ಹುದ್ದೆಗೆ ಹೊಂದಿರುವ ಅಥವಾ ಹಿಂದೆ ಹೊಂದಿದ್ದಲ್ಲಿ, ಗರಿಷ್ಠ ವಯೋಮಿತಿಯನ್ನು ಅವರು ಎಷ್ಟು ವರ್ಷಗಳು ಅವರಿಗೆ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವರೋ ಅಥವಾ ಹಿಂದೆ ಸಲ್ಲಿಸಿದ್ದರೋ ಅಷ್ಟು ವರ್ಷಗಳು ಅಥವಾ 10 ವರ್ಷಗಳ ಅವಧಿ, ಎರಡರಲ್ಲಿ ಯಾವುದು ಕಡಿಮೆಯೋ ಅಷ್ಟು ವರ್ಷಗಳ ಸಡಿಲಿಕೆಯನ್ನು ನೀಡಲಾಗುವುದು.
- ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ, ಅವನು ಸಶಸ್ತ್ರ ದಳಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿರುವನೋ ಆ ವರ್ಷಗಳಿಗೆ 03 ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾಗುವುದೋ ಅಷ್ಟು ವರ್ಷಗಳು.
- ಅಭ್ಯರ್ಥಿಯು ಅಂಗವಿಕಲನಾಗಿದ್ದಲ್ಲಿ, ವಿಧವೆಯಾಗಿದ್ದಲ್ಲಿ ಮತ್ತು ಜೀತ ಕಾರ್ಮಿಕನಾಗಿದ್ದಲ್ಲಿ 10 ವರ್ಷಗಳು
ಪರಿವೀಕ್ಷಣಾ ಅವಧಿ:
ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ.
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ:
ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಕರ್ನಾಟಕ ನಾಗರಿಕ ಸೇವಾ ನಿಯಮಗಳು (ಸಾಮಾನ್ಯ ನೇಮಕಾತಿ) ನಿಯಮ 1977 ತಿದ್ದುಪಡಿ ನಿಯಮ 2021 ರೂಲ್ 11ನ್ನು ಅನುಸರಿಸಲು ತಿಳಿಸಲಾಗಿದೆ.
ನಿಗದಿತ ಅರ್ಜಿ ಶುಲ್ಕ: ಪಾವತಿಸಬೇಕಾದ ಶುಲ್ಕ ಹಾಗೂ ವಿಧಾನ:
| ಅಭ್ಯರ್ಥಿಗಳ ವಿವರ | ಶುಲ್ಕ |
| ಸಾಮಾನ್ಯ ಅಭ್ಯರ್ಥಿಗಳಿಗೆ | ರೂ. 200/- |
| ಪ್ರವರ್ಗ-2ಎ/2ಬಿ/3ಎ/3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ. | ರೂ. 100/- |
| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ. | ರೂ. 100/- |
ನಿಗದಿತ ಶುಲ್ಕವನ್ನು ನ್ಯಾಯಾಲಯದ ವೆಬ್‌ಸೈಟ್ https://yadgir.dcourts.gov.in/notice-category/recruitments/ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಭಾರತೀಯ ಸ್ಟೇಟ್ ಬ್ಯಾಂಕ್‌ನ ಎಸ್.ಬಿ.ಐ ಕಲೆಕ್ಟ್ online payment through net banking / credit / debit card / challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಇಚ್ಛಿಸದ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಅದರ ಪ್ರಿಂಟ್ ಔಟ್ ಅನ್ನು ಪಡೆದುಕೊಂಡು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್ / ಪೋಸ್ಟಲ್ ಆರ್ಡರ್ / ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.
ವಿಶೇಷ ಸೂಚನೆಗಳು :-
- ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳುವುದು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು, ಒಂದು ವೇಳೆ ಅರ್ಜಿ ಸರಿಯಾಗಿರದಿದ್ದಲ್ಲಿ ತಿರಸ್ಕರಿಸಲಾಗುವುದು.
- ಅಭ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ತಮಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ.
- ಅಭ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು: ಅ) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು ಅಳತೆಯಲ್ಲಿ 5cm ಉದ್ದ x 3.6cm ಅಗಲವುಳ್ಳದ್ದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು. ಭಾವಚಿತ್ರದ ಹಿನ್ನೆಲೆಯು ಬಿಳಿ ಬಣ್ಣದ್ದಾಗಿದ್ದು ಅದರಲ್ಲೂಯೂ ಹಿಂಬದಿಯ ಭಾಗ ಬಿಳಿ ಬಣ್ಣದ್ದಾಗಿರಬೇಕು ಹಾಗೂ . ಬ) ಕಪ್ಪು ಬಾಲಪಾಯಿಂಟ್ ಪೆನ್ನಿನಲ್ಲಿ ಬಿಳಿಯ ಹಾಳೆಯ ಮೇಲೆ ಸಹಿ ಮಾಡಿ (2.5 cm ಉದ್ದ x 7.5 cm ಅಗಲವುಳ್ಳ ಮತ್ತು 2kb ಅಳತೆಯ ಹಾಗೂ ಅದು .jpg ನಮೂನೆಯಲ್ಲಿರಬೇಕು) ಇದನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು).
- ತದನಂತರ documents upload button ಒತ್ತಿ ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಬಗ್ಗೆ ಚಲನ್ ಪ್ರತಿಯನ್ನು down load ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ, ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂತಿರುಗಿಸಲಾಗುವುದಿಲ್ಲ.
- ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://yadgir.dcourts.gov.in/notice-category/recruitments/ ನಲ್ಲಿ ಅರ್ಜಿಯನ್ನು ಆನ್‌ಲೈನ್ ಮೂಲಕ ನೊಂದಾಯಿಸಲು/ಸಲ್ಲಿಸಲು ದಿನಾಂಕ: 12.04.2026 ರ ರಾತ್ರಿ 11.59 ರವರೆಗೆ ಅವಕಾಶವಿರುತ್ತದೆ ಮತ್ತು ಶುಲ್ಕವನ್ನು ಚಲನ್ ಮುಖಾಂತರ ಪಾವತಿಸಲು 13.04.2026 ಕೊನೆಯ ದಿನಾಂಕವಾಗಿದ್ದು ಅದರೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು. ಶುಲ್ಕ ಪಾವತಿಸಲು ಕೊನೆಯ ದಿನಾಂಕ ರಜೆಯಾಗಿದ್ದರೆ ಮುಂದಿನ ಬ್ಯಾಂಕ್ ವ್ಯವಹಾರದ ದಿನ ಕೊನೆಯ ದಿನಾಂಕವಾಗಿರುತ್ತದೆ.
- ಅರ್ಹ ಅಭ್ಯರ್ಥಿಗಳಿಗೆ SMS ಹಾಗೂ ಇ-ಮೇಲ್ ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಹಾಗೂ ಅಭ್ಯರ್ಥಿಯು ಸದರಿ ಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು ಸಂದರ್ಶನಕ್ಕೆ ಹಾಜರಾಗುವಾಗ ತಪ್ಪದೇ ಹಾಜರುಪಡಿಸತಕ್ಕದ್ದು.
- ಅಭ್ಯರ್ಥಿಗಳು ಈ ಕೆಳಕಂಡ ಪ್ರಮಾಣ ಪತ್ರಗಳನ್ನು ನಿಗದಿತ ನಮೂನೆಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದಿಟ್ಟುಕೊಂಡಿರತಕ್ಕದ್ದು ಹಾಗೂ ಕೋರಿರುವ ಮೀಸಲಾತಿ ಪ್ರಮಾಣ ಪತ್ರಗಳು ಮತ್ತು ಇತರೆ ಪ್ರಮಾಣ ಪತ್ರಗಳನ್ನು ಕೊನೆಯ ದಿನಾಂಕದೊಳಗೆ ಪಡೆದಿಟ್ಟುಕೊಂಡಿರತಕ್ಕದ್ದು ಹಾಗೂ ಅವುಗಳ ಮೂಲ ಪ್ರತಿಗಳನ್ನು ಪರಿಶೀಲನೆಗೆ ಅರ್ಹರಾದಾಗ ಆ ಸಮಯದಲ್ಲಿ ಹಾಜರುಪಡಿಸಬೇಕು. ಇತರ ನಮೂನೆಗಳಲ್ಲಿ ಅಥವಾ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಪಡೆದ ಯಾವುದೇ ಪ್ರಮಾಣ ಪತ್ರಗಳನ್ನು ಪರಿಗಣಿಸಲಾಗುವುದಿಲ್ಲ. ತಪ್ಪಿದ್ದಲ್ಲಿ ಅವರ ಮೀಸಲಾತಿಯನ್ನು/ಅಭ್ಯರ್ಥಿತ್ವವನ್ನು ಅನರ್ಹಗೊಳಿಸಲಾಗುವುದು.
- ಅ) ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ಚಲನ್/ವಿವರದ ಪ್ರತಿ.
- ಆ) ಜನ್ಮ ದಿನಾಂಕದ ದೃಢೀಕರಣಕ್ಕಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ/ವರ್ಗಾವಣೆ ಪಟ್ಟಿ/ಕ್ಯುಮುಲೇಟಿವ್ ರೆಕಾರ್ಡ್ ದಾಖಲಾತಿಗಳು.
- ಇ) ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನಿಗದಿತ ನಮೂನೆಯಲ್ಲಿ ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ಸಲ್ಲಿಸಬೇಕು.
- ಈ) ಗ್ರಾಮೀಣ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಧಿಕೃತ ಪ್ರಾಧಿಕಾರದಿಂದ ಪಡೆದು ಸಲ್ಲಿಸಬೇಕು.
- ಉ) ಮಾಜಿ ಸೈನಿಕ ಮೀಸಲಾತಿಯನ್ನು ಕೋರುವ ಅಭ್ಯರ್ಥಿಗಳು ಸೈನಿಕ ಸೇವೆಯಿಂದ ಬಿಡುಗಡೆಯಾದ/ವಿಮುಕ್ತಿ ಹೊಂದಿದ ಬಗೆಗಿನ ಪ್ರಮಾಣ ಪತ್ರವನ್ನು ಸಲ್ಲಿಸುವುದು.
- ಊ) ವಿಧವೆಯರು, ಜೀತ ಕಾರ್ಮಿಕರು ವಯೋಮಿತಿ ರಿಯಾಯಿತಿ ಕೋರಲು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಸಲ್ಲಿಸುವುದು.
- ಎ) ಅಂಗವಿಕಲ ಮೀಸಲಾತಿ ಪ್ರಮಾಣ ಪತ್ರ (ವಯೋಮಿತಿ ಸಡಿಲಿಕೆಗಾಗಿ ಮೀಸಲಾತಿ ಕೋರಿದ್ದಲ್ಲಿ).
- ಏ) ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ಅಭ್ಯರ್ಥಿಗಳಿಗಾಗಿ (371-J) ಅರ್ಜಿ ಸಲ್ಲಿಸುವವರು ಸರ್ಕಾರದ ಅಧಿಸೂಚನೆ ಸಂಖ್ಯೆ: ಡಿಪಿಎಆರ್/06/ಪಿಎಲ್‌ಎಕ್ಸ್/2012 ದಿನಾಂಕ: 06.11.2013 ರಲ್ಲಿ ಗೊತ್ತುಪಡಿಸಿದ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಅರ್ಹತಾ ಪ್ರಮಾಣ ಪತ್ರ.
- ಐ) ಅರ್ಜಿಯನ್ನು ಕಳುಹಿಸಲು ನಿಗದಿಪಡಿಸಿದ ದಿನಾಂಕದಿಂದ 6 ತಿಂಗಳ ಒಳಗೆ ಇಬ್ಬರು ಗೌರವಾನ್ವಿತ ವ್ಯಕ್ತಿಗಳು ನೀಡಿರುವ ನಡತೆ ಪ್ರಮಾಣ ಪತ್ರಗಳು ಹಾಗೂ ಶಾಲಾ ನಡತೆ ಪ್ರಮಾಣ ಪತ್ರ ಸಲ್ಲಿಸುವುದು.
- ಒ) ನಿರಾಕ್ಷೇಪಣಾ ಪತ್ರ (ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು ಕ.ನಾ.ಸೇ ನಿಯಮಗಳು (ಸಾಮಾನ್ಯ ನೇಮಕಾತಿ) ನಿಯಮ 1977 ತಿದ್ದುಪಡಿ ನಿಯಮ 2020 ರೂಲ್ 11ನ್ನು ಅನುಸರಿಸಲು ತಿಳಿಸಲಾಗಿದೆ).
Apply Link
Apply Online:
https://yadgir.dcourts.gov.in/notice-category/recruitments/
Notification PDF
Download Official Notification:
https://yadgir.dcourts.gov.in/notice-category/recruitments/
FAQ
1. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಿದ್ಯಾರ್ಹತೆ ಏನು?
SSLC ಪಾಸ್ ಸಾಕು.
2.ಆಯ್ಕೆ ವಿಧಾನ ಏನು?
SSLC ಅಂಕ + Interview.
3. ಮಹಿಳೆಯರಿಗೆ ಅವಕಾಶ ಇದೆಯಾ?
ಹೌದು, ಮೀಸಲಾತಿ ಅನ್ವಯವಾಗುತ್ತದೆ.
4.Driving Licence ಕಡ್ಡಾಯವೇ?
ಇಲ್ಲ, ಆದರೆ ಇದ್ದರೆ ಆದ್ಯತೆ.
5.ಅರ್ಜಿ Offline ಸಲ್ಲಿಸಬಹುದಾ?
ಇಲ್ಲ, ಕೇವಲ Online ಮಾತ್ರ.
6.ಒಟ್ಟು ಎಷ್ಟು ಹುದ್ದೆಗಳು?
09 ಹುದ್ದೆಗಳು.
ಇದನ್ನೂ ಓದಿ :- ಚಾಮರಾಜನಗರ ಜಿಲ್ಲಾ ನ್ಯಾಯಾಲಯ ನೇಮಕಾತಿ 2026: 25 ಹುದ್ದೆಗಳ ಭರ್ತಿ | SSLC ಮತ್ತು PUC ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ
ಹೆಚ್ಚಿನ ಉದ್ಯೋಗ ಮಾಹಿತಿಗಳಿಗಾಗಿ udyogasihi.com ಗೆ ಭೇಟಿ ನೀಡಿ .
1 thought on “ಯಾದಗಿರಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2026 – 10ನೇ ಪಾಸ್ ಅಭ್ಯರ್ಥಿಗಳಿಗೆ ದೊಡ್ಡ ಅವಕಾಶ | 9 Process Server ಹುದ್ದೆಗಳು”